ಬೆಂಗಳೂರು: ಬಳ್ಳಾರಿಯ ವಿಮ್ಸ್‌ನಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಮಾಹಿತಿ ಪಡೆದ ಸಚಿವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮುನ್ನಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.
ಈ ಹಿಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ್ದ ನಾಲ್ಕು ಬಾಣಂತಿಯರ ಸಾವು ಪ್ರಕರಣಕ್ಕೂ ಈ ಘಟನೆಗೆ ಸಂಬಂಧ ಇಲ್ಲ. ಕೂಡ್ಲಿಗಿ ಗುಡೇಕೋಟೆ ಪ್ರಾಥಮಿಕ ಅರೋಗ್ಯ ಕೇಂದ್ರ ದಿಂದ ಮಹಾಲಕ್ಷ್ಮಿ ಎಂಬುವರು ವಿಮ್ಸ್‌ಗೆ ನವೆಂಬರ್ 24ರಂದು ದಾಖಲಾಗಿ ನವೆಂಬರ್ 26 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಅರೋಗ್ಯ ಅಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದ್ದಾರೆ.
PublicNext
28/11/2024 01:49 pm