ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೊರಬ : ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಮೂಡಿಸಿ !

ಸೊರಬ : ಮಕ್ಕಳಿಗೆ ಶಾಲಾ ಕಲಿಕೆಯ ಹಂತದಲ್ಲಿಯೇ ಸಾಹಿತ್ಯಾಸಕ್ತಿ ಮೂಡಿಸಬೇಕು ಹಾಗೂ ಸ್ಪಷ್ಟವಾಗಿ ಓದುವ, ಬರೆಯುವ ಮತ್ತು ಮಾತನಾಡುವುದನ್ನು ರೂಢಿಸಬೇಕು ಎನ್ನುವ ನಿಟ್ಟಿನಲ್ಲಿ ಕಳೆದ ಹತ್ತೊಂಬತ್ತು ವರ್ಷಗಳಿಂದ ಸತತ ಪ್ರಯತ್ನದ ಭಾಗವಾಗಿ ಸಾಹಿತ್ಯ ಕಮ್ಮಟ ನಡೆಸಲಾಗುತ್ತಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು.

ಗುರುವಾರ ಪಟ್ಟಣದ ಹಳೇಸೊರಬದ ಅಮರ ಜ್ಯೋತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅಮರ ಜ್ಯೋತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಸಾಹಿತ್ಯ ರಚನಾ ಕಮ್ಮಟ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಕ್ಕೆ ಸುಮಾರು 2500 ವರ್ಷಗಳ ಇತಿಹಾಸ ಇರುವ ಹಿನ್ನೆಲೆಯಲ್ಲಿಯೇ ಶಾಸ್ತ್ರೀಯ ಭಾಷಾ ಸ್ಥಾನಮಾನ ದೊರೆತಿದೆ. ಭಾಷಾ ಕಲಿಕೆ ಅತ್ಯಂತ ಜವಾಬ್ದಾರಿಯುತವಾಗಿದ್ದು, ರಾಜ್ಯೋತ್ಸವದ ಸಂದರ್ಭದಲ್ಲಿ ಸಂಭ್ರಮಿಸಿದರೆ ಸಾಲದು. ಮಕ್ಕಳಿಗೆ ಪಠ್ಯದ ಜೊತೆಗೆ ಸಾಹಿತ್ಯ ಅಭಿರುಚಿ ಮೂಡಿಸಲು ಕಥೆ, ಕವನ, ಪ್ರಬಂಧ ವಿಚಾರವಾಗಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ. ಅವುಗಳನ್ನು ಅರ್ಥೈಸಿಕೊಂಡು ಸಾಹಿತ್ಯ ಬರೆಯುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಹಿತ್ಯ ಕಮ್ಮಟದಿಂದ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಸಾಧ್ಯವಾಗುತ್ತದೆ. ಕನ್ನಡ ಸುಂದರ, ಸುಲಲಿತವಾದ ಭಾಷೆಯಾಗಿದ್ದು, ಅನ್ಯ ಭಾಷಿಕರನ್ನು ತನ್ನತ್ತ ಸೆಳೆಯುವ ಶಕ್ತಿಯನ್ನು ಹೊಂದಿದೆ. ಜಿಲ್ಲಾ ಕೇಂದ್ರಕ್ಕೆ ಸೀಮಿತವಾಗಿದ್ದ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ತಾಲೂಕು ಕೇಂದ್ರದಲ್ಲಿ ನಡೆದಿರುವುದು ನಮ್ಮೆಲ್ಲರ ಹೆಮ್ಮೆಯ ವಿಷಯವಾಗಿದೆ. ಸಂಘಟನೆಯಿಂದ ಸುಮಾರು 400 ಸಾಧಕರನ್ನು ಗುರುತಿಸಿ, ಗೌರವಿಸುವ ಕೆಲಸವನ್ನು ಮಾಡಲಾಗಿದೆ. ಇಂತಹ ಕಮ್ಮಟಗಳು ನಿರಂತರವಾಗಿ ನಡೆಯಬೇಕು ಎನ್ನುವ ಉದ್ದೇಶ ಹೊಂದಲಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಪುಷ್ಪಾ, ಶಿಕ್ಷಣ ಇಲಾಖೆಯ ಸಂಜೀವ ಕುಮಾರ್, ರವಿಕುಮಾರ್ ಸೇರಿದಂತೆ ಮತ್ತಿತರರಿದ್ದರು.

Edited By : PublicNext Desk
Kshetra Samachara

Kshetra Samachara

28/11/2024 01:59 pm

Cinque Terre

1.4 K

Cinque Terre

0

ಸಂಬಂಧಿತ ಸುದ್ದಿ