ಚಿಕ್ಕಮಗಳೂರು : ವಿದ್ಯಾರ್ಥಿಗಳಲ್ಲಿ ಅಡಗಿರುವ ಕಲೆ,ಸಂಗೀತ,ಗಾಯನ ಹಾಗೂ ನೃತ್ಯದ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದೇ ಚುಂಚೋತ್ಸವದ ಮೂಲಧ್ಯೇಯ ಎಂದು ಆದಿ ಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ಸಿ.ಟಿ.ಜಯದೇವ್ ಹೇಳಿದರು. ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಹಮ್ಮಿಕೊಂಡಿದ್ಧ ಚುಂಚನ-2024ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂಸ್ಥೆಯು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣದೊಂದಿಗೆ ಸದಾ ಕ್ರೀಡೆ, ಕಲೆ ಹಾಗೂ ಇನ್ನಿತರ ನಿರ್ದಿಷ್ಟ ಚಟುವಟಿಕೆಗಳಿಗೂ ಆಧ್ಯತೆ ನೀಡಿ ಪ್ರೋತ್ಸಾಹಿಸುತ್ತಿದೆ. ಸಂಸ್ಥೆಯ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿಯು ಬಹಳ ಆಸಕ್ತಿಯಿಂದ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದ್ದಾರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಆಸಕ್ತಿ ಹಾಗೂ ಮುಕ್ತ ಮನಸ್ಸಿನಿಂದ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಕಾರಣರಾಗಬೇಕು ಎಂದು ತಿಳಿಸಿದರು.
Kshetra Samachara
28/11/2024 04:06 pm