ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾನಗಲ್ : ಮನೆಯ ಹಕ್ಕು ಪತ್ರ ನೀಡಲು ಹಿರೇಬಾಸೂರು ಗ್ರಾಮಸ್ಥರ ಆಗ್ರಹ

ಹಾನಗಲ್ಲ : ತಾಲೂಕಿನ ಹಿರೇಬಾಸೂರು ಗ್ರಾಮದ ಸರ್ವೆ ನಂ. 139/ಎ ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಗ್ರಾಮಸ್ಥರಿಗೆ ಹಕ್ಕುಪತ್ರ ದೊರಕಿಸುವಂತೆ ಶಾಸಕ ಶ್ರೀನಿವಾಸ ಮಾನೆ ಅವರಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡು ಹಲವು ವರ್ಷಗಳಿಂದ ವಾಸಿಸುತ್ತಿದ್ದೇವೆ. ಹಕ್ಕುಪತ್ರ ಇಲ್ಲದ ಕಾರಣ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಬ್ಯಾಂಕುಗಳು ಸಾಲಸೌಲಭ್ಯ ಸಹ ನೀಡುತ್ತಿಲ್ಲ. ಹಕ್ಕುಪತ್ರ ನೀಡುವಂತೆ ಅನೇಕ ವರ್ಷಗಳಿಂದ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಹ ಪ್ರಯೋಜನವಾಗುತ್ತಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.

ಈ ಸಂದರ್ಭದಲ್ಲಿ ಶಾಸಕ ಮಾನೆ ಮಾತನಾಡಿ, ತಾಲೂಕಿನಲ್ಲಿ ಸರ್ಕಾರಿ ಮತ್ತು ಖಾಸಗಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ 13 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ದೊರಕಿಸುವ ಪ್ರಯತ್ನ ನಡೆಸಲಾಗಿದೆ. ಇದು ನಿನ್ನೆ ಮೊನ್ನೆಯ ಸಮಸ್ಯೆಯಲ್ಲ, 30, 40 ವರ್ಷಗಳ ಸಮಸ್ಯೆ. ದೀರ್ಘಾವಧಿಯ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಹೊಸದಾಗಿ ಕಂದಾಯ ಗ್ರಾಮ, ಉಪ ಗ್ರಾಮ ರಚನೆ ಮಾಡಿ ಹಕ್ಕುಪತ್ರ ವಿತರಿಸಲಾಗುತ್ತಿದೆ. ನಿಯಮಾನುಸಾರ ಫಾರ್ಮ್ ನಂ. 57 ರಲ್ಲಿ ಅರ್ಜಿ ಸಲ್ಲಿಸಿದ ಅರ್ಹರಿಗೆ ಖಂಡಿತವಾಗಿಯೂ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮಸ್ಥರಾದ ರಾಜೂ ಹರಿಜನ, ಉಮೇಶ ಭಜಂತ್ರಿ, ಅತಾವುಲ್ಲಾ ಉಪ್ಪಣಸಿ, ಪ್ರವೀಣ ಹರಿಜನ, ಅಬ್ದುಲಖಾದರ ಮುಲ್ಲಾ, ಅಜ್ಜಪ್ಪ ಬ್ಯಾತನಾಳ, ಮಲ್ಲೇಶ ಪೂಜಾರ, ಫಿದಾ ಹಾನಗಲ್, ಇಸಾಕ್ ಹಾನಗಲ್ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/11/2024 07:53 pm

Cinque Terre

1,000

Cinque Terre

0

ಸಂಬಂಧಿತ ಸುದ್ದಿ