ಶಿಗ್ಗಾವಿ: ಮಾಜಿ ಶಾಸಕ, ಅಜ್ಜಂಪೀರ್ ಖಾದ್ರಿ ನಾಳೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ಅಧ್ಯಕ್ಷರಾಗಿ ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದು ಸಚಿವರು, ಶಾಸಕರು, ಮುಖಂಡರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ತಾಲೂಕಿನ ಹುಲಗೂರಿನಲ್ಲಿ ಮಾದ್ಯಮದವರೊಂದಿಗೆ ಮಾಜಿ ಶಾಸಕ ಅಜ್ಜಂಪೀರ ಖಾದ್ರಿಯವರು ಮಾತನಾಡಿ, ಪದಗ್ರಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಉತ್ಸುವಾರಿ ಸಚಿವ ಶಿವಾನಂದ ಪಾಟೀಲ, ಸಚಿವ ಸತೀಶ ಜಾರಕಿಹೊಳಿ, ಸಚಿವ ಜಮೀರ ಅಹ್ಮದ, ಸಚಿವ ರಹಿಂಖಾನ, ವಿ.ಪ ಸದಸ್ಯ ಸಲಿಂಅಹ್ಮದ, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ನಸೀರ ಅಹ್ಮದ, ಶಾಸಕರುಗಳಾದ ಬಸವರಾಜ ಶಿವಣ್ಣವರ, ಶ್ರೀನಿವಾಸ ಮಾನೆ, ಕೋಳಿವಾಡ, ಉಬಿ ಬಣಕಾರ, ಪ್ರಸಾದ ಅಭ್ಭಯ್ಯಾ, ಕೋಣರೆಡ್ಡಿ, ಜೆ.ಎಸ್ ಪಾಟಿಲ, ಕೆ.ಆರ್ ಪಾಟೀಲ, ಗಡ್ಡದೇವರಮಠ ಸೇರಿದಂತೆ ಅನೇಕ ಶಾಸಕರು, ಮಾಜಿ ಶಾಸಕರು, ಬ್ಲಾಕ್ ಅಧ್ಯಕ್ಷರು, ಮುಖಂಡರು ಭಾಗವಹಿಸಲಿದ್ದು ಮೊದಲಿಗೆ ಶರಣರ ಸ್ಥಳವಾದ ಹುಲಗೂರಿನ ಹಜರತ ಶಾ ಖಾದ್ರಿ ದರ್ಗಾದಲ್ಲಿ ಪೂಜೆ ಸಲ್ಲಿಸಿ, ಕಾರ್ಯಕರ್ತರನ್ನು ಉದ್ದೇಶಿ ಮಾತನಾಡಿ, ಹುಬ್ಬಳ್ಳಿಯ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸೈಯದ್ ಅಜ್ಜಂಪೀರ್ ಖಾದ್ರಿ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಯಶಸ್ವಿಯಾದ ಬೆನ್ನಲ್ಲೇ ಖಾದ್ರಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸ್ಕಾಂ ಅಧ್ಯಕ್ಷ ಸ್ಥಾನದ ಉಡುಗೊರೆ ನೀಡಿದ್ದರು. ಇದೀಗ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಎಲ್ಲ ಸೌಲಭ್ಯಗಳನ್ನು ನೀಡಿಲಾಗಿದ್ದು ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ವಿ. ಸುನಂದಮ್ಮ ಆದೇಶಿಸಿದ್ದಾರೆ.
PublicNext
28/11/2024 08:52 pm