ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ-204 ಕ್ಕೆ ಅನುಮೋದನೆ ನೀಡಲಾಯಿತು.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ಇಲ್ಲಿಯವರೆಗೆ ರಾಜ್ಯಪಾಲರು ಕುಲಪತಿಗಳಾಗಿದ್ದರು. ತಿದ್ದುಪಡಿಯ ನಂತರ ಮುಖ್ಯಮಂತ್ರಿಗಳು ಕುಲಪತಿಗಳಾಗಲಿದ್ದಾರೆ.
ವಿಶ್ವವಿದ್ಯಾಲಯ ಹೆಚ್ಚು ಕ್ರಿಯಾಶೀಲವಾಗಬೇಕು ಹಾಗೂ ನಿರ್ಣಯಗಳು ಶೀಘ್ರವಾಗಿ ಆಗಬೇಕು ಎನ್ನುವ ಕಾರಣಕ್ಕೆ ತಿದ್ದುಪಡಿ ಮಾಡಲಾಗಿದೆ. ಈ ಮೂಲಕ ಸಿಎಂ ಇನ್ಮೆಂದೆ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಚಾನ್ಸಲರ್ ಆಗಲಿದ್ದಾರೆ.
ಒಟ್ಟಾರೆ ಈ ವಿಧೇಯಕ ಮೂಲಕ ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಹಿಂಪಡೆದು ಮುಖ್ಯಮಂತ್ರಿಗಳಿಗೆ ಸಂಪುಟ ನೀಡಿದೆ.
PublicNext
28/11/2024 10:15 pm