ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ವರ್ಷ 2025ರ ಫೆಬ್ರವರಿಯಲ್ಲಿ ಬೃಹತ್ ಮಟ್ಟದಲ್ಲಿ ನಡೆಸಲಾಗುತ್ತಿರುವ ಜಾಗತಿಕ ಕರ್ನಾಟಕ ಹೂಡಿಕೆದಾರರ ಸಮಾವೇಶಕ್ಕೆ ತಯಾರಿ ಜೋರಾಗಿಯೇ ನಡೆದಿದೆ.
ಈಗಾಗಲೇ ಇದಕ್ಕಾಗಿ ದೇಶ ವಿದೇಶಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಇಲಾಖೆ ಸಚಿವ ಡಾ.ಎಂ.ಬಿ.ಪಾಟೀಲ ಅವರ ನೇತೃತ್ವದ ತಂಡ ಪ್ರವಾಸ ಕೈಗೊಂಡಿದೆ. ಹೂಡಿಕೆದಾರರನ್ನು ಕರ್ನಾಟಕಕ್ಕೆ ಆಕರ್ಷಿಸುತ್ತಿದೆ. ಈ ಜಾಗತಿಕ ಹೂಡಿಕೆಯನ್ನು ಕರ್ನಾಟಕಕ್ಕೆ ಆಕರ್ಷಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯಲ್ಲಿ ಹೊಸ ಹುದ್ದೆ ಸೃಷ್ಟಿಸಲಾಗಿದೆ. ಹಿರಿಯ ಐಎಎಸ್ ಅಧಿಕಾರಿ ಗುಂಜನ್ ಕೃಷ್ಣ ಅವರನ್ನು ಸಿಇಒ ಆಗಿ ನಿಯೋಜನೆ ಮಾಡಲಾಗಿದೆ.
ಈಗಾಗಲೇ ಕರ್ನಾಟಕ ಕೈಗಾರಿಕಾ ಇಲಾಖೆ ಆಯುಕ್ತರು ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿರುವ ಗುಂಜನ್ ಕೃಷ್ಣ ಅವರು ಈ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಗುಂಜನ್ ಕೃಷ್ಣ ಅವರು 2004ನೇ ಬ್ಯಾಚ್‌ನ ಐಎಎಸ್ ಅಧಿಕಾರಿ. ಉತ್ತರ ಭಾರತ ಮೂಲದವರು. ಎರಡು ದಶಕದಿಂದ ಕರ್ನಾಟಕದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
PublicNext
28/11/2024 10:31 pm