ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶೃಂಗೇರಿ: ನಾಳೆ ಇತಿಹಾಸ ಪ್ರಸಿದ್ಧ ಪುರಾತನ ಋಷ್ಯಶೃಂಗೇಶ್ವರ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ

ಶೃಂಗೇರಿ: ಇತಿಹಾಸ ಪ್ರಸಿದ್ಧ ಪುರಾತನ ಋಷ್ಯಶೃಂಗೇಶ್ವರ ದೇವಸ್ಥಾನದಲ್ಲಿ 12ನೇ ವರ್ಷದ ಸಾರ್ವಜನಿಕ ಲಕ್ಷ ದೀಪೋತ್ಸವ ಕಾರ್ಯಕ್ರಮವು ನವೆಂಬರ್‌ 30 ಶನಿವಾರದಂದು ನೆರವೇರಲಿದೆ. ದೇವಸ್ಥಾನದ ಮುಂಭಾಗದಲ್ಲಿ ಸಂಜೆ 6 ಗಂಟೆಯಿಂದ ಕಲಾವಿದರು ಹಾಗೂ ಸ್ಥಳೀಯ ಅಂಗನವಾಡಿ ಮಕ್ಕಳು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7-30ಕ್ಕೆ ಸರಿಯಾಗಿ 12ನೇ ವರ್ಷದ ಸಾರ್ವಜನಿಕ ಲಕ್ಷ ದೀಪೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಸಮಿತಿಯ ಸದಸ್ಯರು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

29/11/2024 11:15 am

Cinque Terre

1.6 K

Cinque Terre

0

ಸಂಬಂಧಿತ ಸುದ್ದಿ