ಕೋಲಾರ: ದಾರಿ ಕೇಳುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದು ಅಪರಿಚಿತರಿಂದ ಮಹಿಳೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದ ಖದೀಮರನ್ನು ಕೋಲಾರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ಗ್ರಾಮದ ಸನೀಲ್ ಕುಮಾರ್ ಕೆಎನ್, ಶ್ರೀನಿವಾಸಪುರ ತಾಲೂಕಿನ ಯಲ್ದೂರು ಮಂಜುನಾಥ್ ಬಂಧಿತರು. ಸುಮಾರು 12 ಲಕ್ಷ ಬೆಲೆಬಾಳುವ 179 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕೋಲಾರ ತಾಲೂಕಿನ ಹೊಲ್ಲಂಬಳ್ಳಿ ಪಾರ್ವತಮ್ಮ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಹುತ್ತೂರು ಕಡೆಯಿಂದ ಕಳ್ಳರು ಬಂದಿದ್ದರು. ಬಳಿಕ ಷಾಪುರ ಗ್ರಾಮಕ್ಕೆ ಹೇಗೆ ಹೋಗಬೇಕು ಎಂದು ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಸುಮಾರು 60 ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದರು. ಚಿನ್ನ ಕಳೆದುಕೊಂಡು ಪಾರ್ವತಮ್ಮ ಕೋಲಾರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
PublicNext
29/11/2024 12:38 pm