ಮುಳಬಾಗಿಲು: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆ ಗಣೇಶನಿಗೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಬಣ ವಿಶೇಷ ಪೂಜೆ ಸಲ್ಲಿಸುವ ಮೂಲಕ ತನ್ನ ಪ್ರವಾಸ ಆರಂಭಿಸಿತು.
ವಕ್ಫ್ ವಿರುದ್ಧ ಹೋರಾಟವನ್ನು ಮುಂದುವರಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಣಕ್ಕೆ ವಿಜಯೇಂದ್ರ ಗುಂಪು ಸೆಡ್ಡು ಹೊಡೆದಿದ್ದು, ಬಿಜೆಪಿ ಬಣ ಸಂಘರ್ಷ ತಾರಕ್ಕೇರಿದೆ. ವಿಜಯೇಂದ್ರ ಬೆಂಬಲಕ್ಕೆ ನಿಂತಿರುವ ಮಾಜಿ ಸಚಿವರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಎಂ.ಪಿ.ರೇಣುಕಾಚಾರ್ಯ, ಬಿ.ಸಿ.ಪಾಟೀಲ್ ಹಾಗೂ ಕೆಲ ಮಾಜಿ ಶಾಸಕರ ನೇತೃತ್ವದಲ್ಲಿ ಈ ಪ್ರವಾಸಕ್ಕೆ ಚಾಲನೆ ನೀಡುವ ಮೂಲಕ ಯತ್ನಾಳ್ ಬಣದ ವಿರುದ್ಧ ಹೋರಾಟ ಆರಂಭಿಸಿದೆ.
Kshetra Samachara
29/11/2024 05:10 pm