ಕಾರವಾರ: ಜಿಲ್ಲೆಯು 50 ಕ್ಕೂ ಹೆಚ್ಚು ಪ್ರವಾಸಿತಾಣಗಳಿದ್ದು ಪ್ರವಾಸಿಗರನ್ನು ಆಕರ್ಷಿಸಲು ಖಾಸಗಿ ಸಹಭಾಗಿತ್ವದಲ್ಲಿ ಹೆಚ್ಚುವರಿ ಕಾರ್ಯಕ್ರಮಗಳನ್ನು ಆಯೋಜಿಸಲು ಪ್ರವಾಸೋದ್ಯಮ ಇಲಾಖೆಯು ಮುಂದಾಗಿದೆ. ಕಡಲತೀರ ಮತ್ತು ಪ್ರವಾಸಿ ತಾಣಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಪರಂಪರೆ, ಆಚಾರ-ವಿಚಾರ ಸ್ಥಳೀಯ ಕಲೆಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆಗಳು, ಆಹಾರ ಉತ್ಪನ್ನಗಳ ಮೇಳ, ಉತ್ಸವಗಳನ್ನು ಆಚರಿಸಲು ನಿರ್ಧರಿಸಲಾಗಿದೆ.
ಆಸಕ್ತರು ಡಿ.12 ರೊಳಗೆ ತಮ್ಮ ಕಾರ್ಯಕ್ರಮದ ಬಗ್ಗೆ ಸಂಕ್ಷಿಪ್ತ ಪ್ರಸ್ತಾವನೆಯನ್ನು ತಯಾರಿಸಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Kshetra Samachara
29/11/2024 07:54 pm