ಕೋಲಾರ: ಸುಪ್ರೀಂ ಕೋರ್ಟ್ ಆದೇಶವನ್ನು ಅಂಗೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಒಳಮಿಸಲಾತಿ ವರ್ಗೀಕರಣ ಮಾಡದೆ ವಿಳಂಬ ಧೋರಣೆ ತೋರುತ್ತಿರುವುದು ಖಂಡನೀಯ ಎಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ ಎಂ ದೇವರಾಜ್ ಆರೋಪಿಸಿದ್ದಾರೆ.
ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಸಿ ಮಾತನಾಡಿದ ಅವರು, ಆಗಸ್ಟ್ 1ರಂದು ಸುಪ್ರೀಂ ಕೋರ್ಟ್ ಒಳ ಮೀಸಲಾತಿಯನ್ನು ಅಂಗಿಕರಿಸಿದ್ದು, ಸಿದ್ದರಾಮಯ್ಯ ವಿಳಂಬ ಧೋರಣೆ ಮಾಡುವ ಮೂಲಕ ಸುಪ್ರೀಂ ಕೋರ್ಟ್ ಆದೇಶವನ್ನು ಕಡೆಗಣಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಲಿತರ ಪರವಾಗಿ ಕೆಲಸ ಮಾಡುವ ಸರ್ಕಾರವೆಂದು, ತಾವು ಅಹಿಂದ ನಾಯಕನೆಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರಿಗೆ ಒಳಮೀಸಲಾತಿ ನೀಡದೆ ಅನ್ಯಾಯ ಮಾಡುತಿದ್ದಾರೆ ಎಂದು ಆರೋಪಿಸಿದರು.
ಒಳಮೀಸಲಾತಿ ಶೀಘ್ರವೇ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಿದ್ದರಾಮಯ್ಯ ಕ್ಷೇತ್ರ ವರುಣದಲ್ಲಿನ ಸಿಎಂ ನಿವಾಸದಿಂದ ವಿಧಾನಸೌಧದವರೆಗೂ ಪಾದಯಾತ್ರೆ ಮಾಡಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
PublicNext
30/11/2024 12:51 pm