ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ಘೋಷಣೆಗೆ ವಿರೋಧ

ಚಿಕ್ಕಮಗಳೂರು: ರಾಜ್ಯದ ಅತಿ ಎತ್ತರದ ಶಿಖರ ಹಾಗೂ ಚಂದ್ರದ್ರೋಣ ಪರ್ವತ ಶ್ರೇಣಿಯ ಪ್ರಮುಖ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ವ್ಯಾಪ್ತಿಯನ್ನು ಸಂರಕ್ಷಿತ ಮೀಸಲು ಪ್ರದೇಶ ಎಂದು ಅರಣ್ಯ ಇಲಾಖೆ ಘೋಷಿಸಲು ಹೊರಟಿದೆ ಇದನ್ನು ನಾವು ವಿರೋಧಿಸುತ್ತೇವೆಂದು ಕಸ್ತೂರಿ ರಂಗನ್ ವರದಿ ವಿರೋಧಿ ಮತ್ತು ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ವಿಜಯಕುಮಾರ್ ತಿಳಿಸಿದ್ದಾರೆ.

13 ಸಾವಿರ ಎಕರೆ ಪ್ರದೇಶವನ್ನು ಸಂರಕ್ಷಿತ ಮೀಸಲು ಪ್ರದೇಶ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ ಅರಣ್ಯ ಇಲಾಖೆ ಜನರಿಂದ ಮತ್ತು ಜನಪ್ರತಿನಿಧಿಗಳಿಂದ ಮುಚ್ಚಿಟ್ಟು  ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ  ವ್ಯಾಪ್ತಿಗೆ   ಸುಮಾರು 23,500 ಎಕರೆ ಪ್ರದೇಶ ಸೇರಿಸಿ ಘೋಷಣೆ ಮಾಡಲು ಅರಣ್ಯ ಇಲಾಖೆ ತಯಾರಿ ನಡೆಸುತ್ತಿದ್ದು ಇದನ್ನು ವಿರೋಧಿಸಿ ಹಾಗೂ ಅರಣ್ಯ ಭೂಮಿಯಲ್ಲಿನ ರೈತರ ಸಮಸ್ಯೆಗಳ ಕುರಿತು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಪರಿಹಾರ ನಿರ್ಣಯವನ್ನು ಕೈಗೊಳ್ಳುವಂತೆ ಒತ್ತಾಯಿಸಿ ಡಿಸೆಂಬರ್ 5ರಂದು ಗಾಂಧಿ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ತಿಳಿಸಿದರು.

Edited By : PublicNext Desk
PublicNext

PublicNext

30/11/2024 01:59 pm

Cinque Terre

14.32 K

Cinque Terre

0

ಸಂಬಂಧಿತ ಸುದ್ದಿ