ಕೊಡಗು: ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ್ದು ಬೈಕ್‌ನ ಹಿಂಬದಿಯಲ್ಲಿದ್ದ ಯುವತಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ಹೊರವಲಯದ ಕಾಟಗೇರಿ ಬಳಿ ನಡೆದಿದೆ.
ದ.ಕನ್ನದ ಜಿಲ್ಲೆಯ ಡಬದ ನಿವಾಸಿ ಚಲಾಯಿಸುತ್ತಿದ್ದ ಬೈಕ್, ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದೆ. ಬೈಕ್ ಸವಾರ ಪಾರಾಗಿದ್ದು, ಹಿಂಬದಿಯಲ್ಲಿದ್ದ ಯುವತಿಗೆ ಗಂಭೀರ ಗಾಯವಾಗಿದೆ. ಯುವತಿಯನ್ನ ಮಡಿಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
30/11/2024 03:58 pm