ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಕುರಿತು ಲಘುವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಜಿ. ಪಂ. ಆವರಣದಲ್ಲಿ ಘೋಷಣೆ ಕೂಗಿದ್ರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎದುರೇ ಘೋಷಣೆ ಕೂಗಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕರ್ತರು ಷಡಾಕ್ಷರಿ ವಿರುದ್ಧ ಆಕ್ರೋಶ ಹೊರಹಾಕಿದ್ರು.
ಸರ್ಕಾರಿ ನೌಕರನಾಗಿದ್ದು ಸಚಿವರ ಬಗ್ಗೆ ಅಗೌರವವಾಗಿ ಮಾತನಾಡಿದ್ದಾರೆ. ಷಡಾಕ್ಷರಿ ಬಿಜೆಪಿ ಏಜೆಂಟ್ ಎಂದು ಆರೋಪಿಸಿ, ಕ್ರಮಕ್ಕೆ ಆಗ್ರಹಿಸಿದ್ರು. ಈ ಸಂಬಂಧ ಸಚಿವ ಮಧು ಬಂಗಾರಪ್ಪಗೆ ಕಾರ್ಯಕರ್ತರು ಮನವಿ ಸಲ್ಲಿಸಿದ್ರು.
PublicNext
30/11/2024 05:47 pm