ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಲಂಚ ತೆಗದುಕೊಂಡ ಗ್ರಾಮ ಲೆಕ್ಕಾಧಿಕಾರಿಗೆ 4ವರ್ಷ ಕಠಿಣ ಶಿಕ್ಷೆ

ಕಾರವಾರ: ಹಳಿಯಾಳದಲ್ಲಿ 2019 ರಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿರೀಶ ರಣದೇವ ಅವರು ಜಮೀನು ಖಾತೆ ಬದಲಾವಣೆಗೆ ಹಣ ಪಡೆಯುತ್ತಿರುವಾಗ ಭ್ರಷ್ಠಚಾರ ನಿಗ್ರಹದಳಕ್ಕೆ ಸಿಕ್ಕಿ ಬಿದ್ದಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು ಭ್ರಷ್ಟಚಾರ ಪ್ರತಿಭಂದಕ ಕಾಯ್ದೆ-1988 ರ ಕಲಂ 7 ರಡಿ 4 ವರ್ಷ ಕಠಿಣ ಶಿಕ್ಷೆ ಹಾಗೂ ಐದು ಸಾವಿರ ರೂ ದಂಡ ವಿಧಿಸಿ ಜಿಲ್ಲಾ ನ್ಯಾಯಾಲಯವು ಆದೇಶಿಸಿದೆ.

ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 3 ತಿಂಗಳು ಶಿಕ್ಷೆ ವಿಧಿಸಲಾಗಿದೆ. ಜಮೀನಿನ ಖಾತೆ ಬದಲಾವಣೆ ಮಾಡಿ ಕೊಡಲು ರೈತರೊಬ್ಬರಿಂದ ಗಿರೀಶ ರಣದೇವ ಮೂರು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಪಡೆಯುವಾಗ ಟ್ರಾಪ್ ಕಾರ್ಯಚರಣೆಯಲ್ಲಿ ಸಿಕ್ಕಿಬಿದ್ದರು. ಈ ಹಿನ್ನೆಲೆಯಲ್ಲಿ ದೋಷಾರೋಪಣ ಪತ್ರ ಸಲ್ಲಿಕೆಯಾಗಿ ವಿಚಾರಣೆ ನಡೆಸಲಾಗಿತ್ತು.

Edited By : PublicNext Desk
Kshetra Samachara

Kshetra Samachara

30/11/2024 07:20 pm

Cinque Terre

3.32 K

Cinque Terre

0