ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಫಿನಾಡಲ್ಲಿ ಕಾಡಾನೆ ದಾಳಿಗೆ ಕೃಷಿಕ ಬಲಿ

ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರೆದಿದೆ. ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕನ ಮೇಲೆ ಒಂಟಿ ಕಾಡಾನೆ ಒಂದು ದಾಳಿ ನಡೆಸಿ ವಿಕೃತವಾಗಿ ಬಲಿ ಪಡೆದಿದೆ. ಆನೆ ದಾಳಿಗೆ ಉಮೇಶ್ (45) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಷಯ ತಿಳಿಯುತ್ತಿದಂತೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳು ಉಪಟಳ ನೀಡುತ್ತಿರುವ ಕುರಿತು ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ರು ಯಾವುದೇ ಪ್ರಯೋಜನ ಆಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದೆರಡು ವರ್ಷದಲ್ಲಿ ಕಾಡಾನೆ ದಾಳಿಗೆ ಹತ್ತಾರು ಜೀವಗಳು ಬಲಿ ಪಡೆದಿದ್ದರೆ ಮತ್ತೊಂದೆಡೆ ಚಿಕ್ಕಮಗಳೂರು ತಾಲೂಕಿನಲ್ಲಿ ಬೀಟಮ್ಮ ಗ್ಯಾಂಗ್ ನ ಉಪಟಳ ಮುಂದುವರೆದಿದೆ.

Edited By : Vinayak Patil
PublicNext

PublicNext

30/11/2024 08:22 pm

Cinque Terre

29.89 K

Cinque Terre

0

ಸಂಬಂಧಿತ ಸುದ್ದಿ