ಮಾಲೂರು - ಸಚಿವ ಸಂಪುಟ ವಿಸ್ತರಣೆಯಾದಲ್ಲಿ ನಾನು ಕೂಡ ಸಚಿವ ಸ್ಥಾನಕ್ಕೆ ಅರ್ಹನಿದ್ದೇನೆ, ಸಚಿವ ಸ್ಥಾನದ ಬೇಡಿಕೆಯನ್ನು ಇಡಲಾಗಿದೆ ಎಂದು ಮಾಲೂರು ಶಾಸಕ ಕೆ ವೈ ನಂಜೇಗೌಡ ಅವರು ಹೇಳಿದರು. ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ್ರು, ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು. ಜಿಲ್ಲೆಯಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರಿದ್ದೇವೆ. ಹಾಗಾಗಿ ಮಂತ್ರಿ ಸ್ಥಾನ ಬೇಕು. ಅಲ್ಲದೇ ಸಚಿವ ಸ್ಥಾನಕ್ಕೆ ನಾನು ಅರ್ಹನಿದ್ದೇನೆ ಎಂದರು. ಮಾಲೂರು ತಾಲೂಕಿನಲ್ಲಿ ನಾನು ಕಾಂಗ್ರೆಸ್ ಕಟ್ಟಿ ಬೆಳೆಸಿದ್ದೇನೆ. ತುಂಬಾ ಕಷ್ಟದಲ್ಲಿ ಎರಡನೇ ಬಾರಿ ಅವಧಿಗೆ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕೋಲಾರ ಜಿಲ್ಲೆಯ ಎಲ್ಲಾ ಶಾಸಕರು ಮಂತ್ರಿ ಸ್ಥಾನವನ್ನು ಕೇಳಿದ್ದೇವೆ. ಜಿಲ್ಲೆಯಲ್ಲಿ ಯಾರಿಗೆ ಸಚಿವ ಸ್ಥಾನ ಕೊಟ್ಟರು ನನಗೆ ಒಪ್ಪಿಗೆ ಇದೆ. ಮಂತ್ರಿ ಸ್ಥಾನ ನೀಡುವ ಕುರಿತ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಡುವೆ ಎಂದು ತಿಳಿಸಿದರು.
Kshetra Samachara
01/12/2024 03:16 pm