ಸಿದ್ದಾಪುರ : ಪ್ರತಿಯೊಂದು ಸಮಾಜದಲ್ಲಿ ಏಳಿಗೆ ಕಾಣಬೇಕಾದರೆ ಸಮಾನತೆ ಕಾಣಬೇಕಾದರೆ ಶಿಕ್ಷಣ ಅತಿ ಮುಖ್ಯ, ಶಿಕ್ಷಣ ಪಡೆದು ವಿದ್ಯಾವಂತರಾಗಿ ನೌಕರಿ ಪಡೆದು ಇನ್ನೂ ಎತ್ತರಕ್ಕೆ ಬೆಳೆಯುವ ಮುಖಾಂತರ ಅಭಿವೃದ್ಧಿ ಹೊಂದಲು ಸಾಧ್ಯ, ಶಿಕ್ಷಣಕ್ಕೆ ತೊಂದರೆಯಾಗದ ರೀತಿಯಲ್ಲಿ ನಾವೆಲ್ಲರೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಕಾರವನ್ನು ನೀಡಬೇಕು ಎಂದು ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಅವರು ರವಿವಾರ ಪಟ್ಟಣದ ರಾಘವೇಂದ್ರ ಮಠದಲ್ಲಿ ಆರ್ಯ ಈಡಿಗ ನಾಮಧಾರಿ ಬಿಲ್ಲವ ಕ್ಷೇಮಾಭಿವೃದ್ಧಿ ಸಂಘದವರು ಏರ್ಪಡಿಸಿದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಸಾಧಕರಿಗೆ ಸನ್ಮಾನಿಸಿ ಮಾತನಾಡಿದರು.
ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ 90% ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ನಿವೃತ್ತ ನೌಕರರು ಸೈನಿಕರು ವಿವಿಧ ಕ್ಷೇತ್ರದಲ್ಲಿನ ಸಾಧಕರನ್ನು ಗೌರವಿಸಿದರು .
ವೇದಿಕೆಯಲ್ಲಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ಗ್ಯಾ ರೆಂಟಿ ಸಮಿತಿ ಅಧ್ಯಕ್ಷ ಕೆಜಿ ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ಕೆ ನಾಯ್ಕ, ಕಾರ್ಯದರ್ಶಿ ಶಾಮ್ ಸುಂದರ್, ಖಜಾಂಚಿ ಎಂ ಕೆ ನಾಯ್ಕ, ಜಿ ಐ ನಾಯ್ಕ್ ಲಯನ್ಸ್ ಕ್ಲಬ್ ಅಧ್ಯಕ್ಷ ಏಜಿ ನಾಯ್ಕ,
ಕಸಪ ಅಧ್ಯಕ್ಷ ಗೋಪಾಲ್ ಬಾಶಿ ಮತ್ತಿತರರು ಉಪಸ್ಥಿತರಿದ್ದರು
Kshetra Samachara
01/12/2024 04:07 pm