ಕೊಡಗು : ಸಿ ಆ್ಯಂಡ್ ಡಿ(ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿ)ಮತ್ತು ಸರ್ಕಾರಿ ಒತ್ತುವರಿ ಭೂಮಿಗೆ ರೈತರಿಗೆ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ ಡಿ.20 ರಂದು ಮಡಿಕೇರಿಯಲ್ಲಿ ರೈತರ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ಚಕ್ರವರ್ತಿ ಹೇಳಿದರು.
ಈಗಾಗಲೇ ಹಾರಂಗಿ ಅಣೆಕಟ್ಟು ಮುಳುಗಡೆಯಿಂದ 3700 ಎಕರೆ, ಹೇಮಾವತಿ ಅಣೆಕಟ್ಟೆಯಿಂದ ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ 11 ಸಾವಿರ ಎಕರೆ ಭೂಮಿಯನ್ನು ಕಳೆದುಕೊಂಡಿದ್ದೇವೆ. ಈಗ ಕೃಷಿ ಮಾಡಿಕೊಂಡಿರುವ 25 ಸಾವಿರ ಎಕರೆ ಭೂಮಿಯನ್ನು ಸಿ ಆ್ಯಂಡ್ ಡಿ ನೆಪದಲ್ಲಿ ಅರಣ್ಯ ಇಲಾಖೆಗೆ ನೀಡಲು ತಯಾರಿ ನಡೆಯುತ್ತಿದೆ ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದರು.
ಕೊಡಗಿನಲ್ಲಿ ಕೃಷಿ ಮಾಡುತ್ತಿರುವ ರೈತರ ಭೂಮಿ ಅಭಯಾರಣ್ಯವಾದರೆ ನೂರಾರು ವರ್ಷಗಳಿಂದ ಬದುಕುತ್ತಿರುವ ರೈತರು ಬೀದಿ ಪಾಲಾಗಬೇಕಾಗುತ್ತದೆ ಎಂದು ನೋವು ತೋಡಿಕೊಂಡರು.
ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಹೋರಾಟವಲ್ಲ. ಆದರೆ ರೈತರಿಗೆ ಅನ್ಯಾಯ ಮಾಡುವ ಯಾವುದೇ ಸರ್ಕಾರಗಳು ಉಳಿಯಲು ಸಾಧ್ಯವಿಲ್ಲ. ಕೂಡಲೆ ರಾಜ್ಯ ಹಾಗು ಕೇಂದ್ರ ಸರ್ಕಾರಗಳು ಈಗಿನ ಅದೇಶವನ್ನು ಮರುಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.
PublicNext
01/12/2024 05:35 pm