ಚಿಕ್ಕಮಗಳೂರು: ಜಿಲ್ಲಾಧಿಕಾರಿ ಮೀನಾ ನಾಗರಾಜ್ ವಿರುದ್ಧ ಬಿಜೆಪಿ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ ಕಲ್ಮರುಡಪ್ಪ ವಾಗ್ದಾಳಿ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂಬಂಧಿ ಎಂಬ ಅಹಂಕಾರದಿಂದ ಬೇಜವಾಬ್ದಾರಿ ರೀತಿಯಲ್ಲಿ ವರ್ತಿಸುತ್ತಿದ್ದು, ಸಾರ್ವಜನಿಕರ ಕಡತಗಳನ್ನು ವಿಲೇವಾರಿ ಮಾಡದೆ, ಜನರಿಗೆ ಸ್ಪಂದಿಸದೆ ಸಮಸ್ಯೆಗಳನ್ನು ಇನ್ನೂ ಜಟಿಲಗೊಳಿಸುತ್ತಿದ್ದಾರೆ. ಜಿಲ್ಲೆಯ ಸಮಸ್ಯೆಯನ್ನು ಬಗೆಹರಿಸುವುದರಲ್ಲಿ ವಿಫಲರಾಗಿದ್ದು, ಯಾವುದೇ ಸಂಘ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಜನ ಸಾಮಾನ್ಯರ ಬಗ್ಗೆ ಕಾಳಜಿ ಇಲ್ಲದೇ ಉದ್ಘಾಟತನದಿಂದ ವರ್ತಿಸುತ್ತಿದ್ದಾರೆ, ಇವರು ಚಿಕ್ಕಮಗಳೂರಿಗೆ ಜಿಲ್ಲಾಧಿಕಾರಿಯಾಗಿ ಬಂದಿಲ್ಲ ಬದಲಾಗಿ ಟೈಮ್ ಪಾಸ್ ಮಾಡಲು ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಗೋ ಬ್ಯಾಕ್ ಜಿಲ್ಲಾಧಿಕಾರಿಗಳೇ ಎಂದು ಕೂಗುವ ದಿನಗಳು ದೂರವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
Kshetra Samachara
01/12/2024 05:49 pm