ಮೈಸೂರು : ಫಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಂಡಮಾರುತ ಪರಿಣಾಮ ತಣ್ಣನೆಯ ಗಾಳಿ, ಜಡಿ ಮಳೆ, ವಿಪರೀತ ಚಳಿಯ ಕಾರಣ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಮೈಸೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಕೋಲಾರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆಕ್ರಮ ಪಾಷಾ ಆದೇಶ ಹೊರಡಿಸಿದ್ದಾರೆ. ಸೋಮವಾರದ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಅವರು ಸೂಚಿಸಿದ್ದಾರೆ.
PublicNext
02/12/2024 08:03 am