ಕೊಡಗು: ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದಾಗಿ ಇಂದು ಕೊಡಗು ಜಿಲ್ಲೆಯಲ್ಲಿ ಮಳೆಯ ಸಿಂಚನವಾಗುತ್ತಿದೆ. ಫೆಂಗಲ್ ಸೈಕ್ಲೋನ್ ಎಫೆಕ್ಟ್ ಕೊಡಗು ಜಿಲ್ಲೆಗೆ ತಟ್ಟಿದ್ದು ಜಿಲ್ಲೆಯ ಹಲವೆಡೆ ಮಳೆಯ ಸಿಂಚನವಾಗುತ್ತಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು ಇಂದು ಮುಂಜಾನೆಯಿಂದಲೇ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ.
ಅಕಾಲಿಕ ಮಳೆಯಿಂದಾಗಿ ವಾಹನ ಸವಾರರು, ಪಾದಚಾರಿಗಳು ಕಿರಿ ಕಿರಿ ಅನುಭವಿಸುತ್ತಿದ್ದಾರೆ. ಅಷ್ಟು ಮಾತ್ರವಲ್ಲ ಫೆಂಗಲ್ ಚಂಡಮಾರುತದ ಎಫೆಕ್ಟ್ ಕೊಡಗಿನ ರೈತರ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಸಮಯದಲ್ಲಿ ಮಳೆಯಾಗುತ್ತಿರೋದು ಕೊಡಗನ ವಾಣಿಜ್ಯ ಬೆಳೆಗಳಾದ ಕಾಫಿ, ಕಾಳುಮೆಣಸು ಬೆಳೆಗಳಿಗೂ ಬಹಳ ಎಫೆಕ್ಟ್ ಬೀರಿದೆ.
ಅಷ್ಟು ಮಾತ್ರವಲ್ಲ ಭತ್ತದ ಕೊಯ್ಲು ಸಮಯ ಕೂಡ ಆರಂಭವಾಗಿರೋದ್ರಿಂದ ಭತ್ತದ ಕೃಷಿ ಮೇಲೂ ಮಳೆ ಬಹಳ ಎಫೆಕ್ಟ್ ಬೀರಿದ್ದು ಅಕಾಲಿಕ ಮಳೆಯಿಂದ ಕೊಡಗಿನ ರೈತರು ಕೂಡ ಕಂಗಲಾಗಿದ್ದಾರೆ. ಜಿಲ್ಲೆಯಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಇಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Kshetra Samachara
02/12/2024 01:24 pm