ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಸಾಹಿತ್ಯ ಸಮ್ಮೇಳನದಲ್ಲಿ ಬಸವೇಶ್ವರರಿಗೆ ಹಾಗೂ ಸಾಹಿತಿಗಳಿಗೆ ಅಗೌರವ - ಜೈ ಕರ್ನಾಟಕ ಆರೋಪ

ವಿಜಯಪುರ: ಸಾಹಿತ್ಯ ಸಮ್ಮೇಳನದಲ್ಲಿ ವಿಶ್ವಗುರು ಬಸವೇಶ್ವರರಿಗೆ ಹಾಗೂ ಸಾಹಿತಿಗಳಿಗೆ ಅಗೌರವ ತೋರಲಾಗಿದೆ ಎಂದು ಆರೋಪಿಸಿ ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿಯೇ ಜೈ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿರುವ ಘಟನೆ ಇವಣಗಿ ಗ್ರಾಮದಲ್ಲಿ ಜರುಗಿದೆ.

ಹೌದು ! ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಸರ್ವಾಧ್ಯಕ್ಷರ ಭಾಷಣದ ಸಂದರ್ಭದಲ್ಲಿ ವೇದಿಕೆಯ ಮುಂಭಾಗಕ್ಕೆ ಆಗಮಿಸಿದ ಜೈ ಕರ್ನಾಟಕ ಸಂಘಟನೆ ಕಾರ್ಯಕರ್ತರು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯಲ್ಲಿ ವಿಶ್ವಗುರು ಬಸವೇಶ್ವರರ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿಗಳ ಭಾವಚಿತ್ರವನ್ನ ಹಾಕದೇ ಸಾಹಿತಿಗಳಿಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ವಿರೋಧ ವ್ಯಕ್ತಪಡಿಸಿದರು.

ಇನ್ನೂ ಈ ಸಂದರ್ಭದಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಪೊಲೀಸರು ಮಧ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.

Edited By : Suman K
Kshetra Samachara

Kshetra Samachara

02/12/2024 01:33 pm

Cinque Terre

4.2 K

Cinque Terre

0