ಕೋಲಾರ : ಕೋಳಿ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಮಾಲೂರು ಪೊಲೀಸರು ದಾಳಿ ನಡೆಸಿ 2 ಕೋಳಿಗಳನ್ನು ಹಾಗೂ 7140 ರೂಗಳನ್ನು ವಶಪಡಿಸಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಬ್ಬೇನಹಳ್ಳಿ ಕೆರೆಯ ಅಂಗಳದಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಮಾಲೂರು ಇನ್ಸ್ಪೆಕ್ಟರ್ ವಸಂತ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಆರೋಪಿಗಳಾದ ಪ್ರೇಮ್ ಕುಮಾರ್, ಲಘುಮಪ್ಪ, ನಾರಾಯಣಪ್ಪ, ಶ್ರೀನಿವಾಸ, ಮಂಜುನಾಥ್, ಮುರಳಿ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2 ಕೋಳಿಗಳನ್ನು 7140 ರೂಗಳ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡು ಇವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗಿದೆ.
Kshetra Samachara
02/12/2024 03:44 pm