ಧಾರವಾಡ : ಆರ್‌ಟಿಓ ಕಚೇರಿಯಲ್ಲಿ ಮಿತಿ ಮೀರಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಧಾರವಾಡದಲ್ಲಿ ಆಟೊ ಚಾಲಕರು ಪ್ರತಿಭಟನೆ ನಡೆಸಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಆರ್‌ಟಿಓ ಕಚೇರಿಯಲ್ಲಿ ಏಜೆಂಟ್‌ರ ಹಾವಳಿ ಹೆಚ್ಚಾಗಿದೆ. ಅಲ್ಲದೇ ಅಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ಅವಳಿನಗರಗಳಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ರಸ್ತೆಗಳ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು. ಅಲ್ಲದೇ ಆಟೊ ಚಾಲಕರಿಗಾಗಿಯೇ ಒಂದು ಕಾಲೊನಿ ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
Kshetra Samachara
02/12/2024 04:30 pm