ಚಿಕ್ಕಮಗಳೂರು: ಕಳೆದೊಂದು ತಿಂಗಳಿಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಆನೆಗಳು ಗುಂಪು ಗುಂಪಾಗಿ ದಾಳಿ ನಡೆಸಿ ಅಪಾರ ಹಾನಿ ಮಾಡಿದ್ದವು. ಆನೆ ದಾಳಿಯಿಂದ ಅಪಾರ ನಷ್ಟ, ಸಾವು-ನೋವುಗಳಾಗುತ್ತಿದ್ದರೂ ನಿರ್ಲಕ್ಷ್ಯ ಧೋರಣೆ ತೋರುತ್ತಿರುವ ಅರಣ್ಯ ಇಲಾಖೆ, ಶಾಸಕರು, ಉಸ್ತುವಾರಿ ಸಚಿವರ ವಿರುದ್ಧ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ವತಿಯಿಂದ,ನಗರದ ಎಐಟಿ ವೃತ್ತದಿಂದ ಡಿ.ಎಫ್. ಓ. ಕಚೇರಿಯವರೆಗೆ ಪ್ರತಿಭಟನೆ ನಡೆಸಿ ಡಿಎಫ್ಓ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಡಿ.ಕಲ್ಮರುಡಪ್ಪ ಸರ್ಕಾರ, ಜಿಲ್ಲಾಡಳಿತ ಇದೆಯೋ, ಇಲ್ಲವೋ ಎನ್ನುವ ಸಂಶಯ ಮೂಡುತ್ತಿದೆ. ಇಷ್ಟೆಲ್ಲಾ ತೊಂದರೆ ಆದರೂ ರೈತರಿಗೆ ಧೈರ್ಯ ತುಂಬುವ ಕೆಲಸ ಆಗುತ್ತಿಲ್ಲ ಎಂದು ದೂರಿದರು. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಬಂದರೂ ಆನೆಗಳು ದಾಳಿ ನಡೆಸಿರುವ ಪ್ರದೇಶಕ್ಕೆ ಭೇಟಿ ನೀಡಿ ರೈತರ ಕಷ್ಟವನ್ನು ಆಲಿಸಿಲ್ಲ ಹೀಗಿದ್ದ ಮೇಲೆ ಜಿಲ್ಲಾ ಮಂತ್ರಿಯಾಗಿ ಯಾಕಿರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
02/12/2024 05:05 pm