ಕೊಡಗು: ಕಾಫಿ ತೋಟಗಳಲ್ಲಿ ಬಿಡು ಬಿಟ್ಟು ಕೃಷಿ ಫಸಲು ನಾಶ ಮಾಡುವುದರ ಮೂಲಕ ಕಾರ್ಮಿಕರು, ಬೆಳಗಾರರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದ 9 ಕಾಡಾನೆಗಳನ್ನು ಮತ್ತೆ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಇತ್ತೀಚೆಗೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಬಾಡಗ ಬಾಣಂಗಾಲ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬಿಡು ಬಿಟ್ಟಿದ್ದ ಕಾಡಾನೆಗಳು ಕೃಷಿ ಪಸಲುಗಳನ್ನು ತಿಂದು ತುಳಿದು ನಾಶ ಮಾಡುವುದರ ಮೂಲಕ ಗ್ರಾಮ ವ್ಯಾಪ್ತಿಯಲ್ಲಿ ಹಾಡಗಲಿನಲ್ಲೂ ರಾಜಾರೋಷವಾಗಿ ತಿರಗಾಡುತ್ತಿತ್ತು. ಕಾರ್ಮಿಕರು ಕೆಲಸಕ್ಕೆ ತೆರಳಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ಶಾಲಾ ವಿದ್ಯಾರ್ಥಿಗಳು ಕಾಡು ಪ್ರಾಣಿಗಳ ಭಯದಿಂದ ಶಾಲೆಗೆ ತೆರಳಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿತ್ತು. ಆನೆಗಳನ್ನು ಕಾಡಿಗಟ್ಟಬೇಕೆಂದು ಸ್ಥಳೀಯರು ಒತ್ತಾಯಿಸಿದ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಾಡಗ ಬಾಣಂಗಾಲ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಮೂರು ಮರಿಯೊಂದಿಗೆ ಒಂಬತ್ತು ಕಾಡಾನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕಾಡಿಗಟ್ಟವ ಕಾರ್ಯಚರಣೆ ಮುಂದುವರಿಸಿ ಮಾರ್ಗೊಳ್ಳಿ ಘಟ್ಟತಳ ಮಾರ್ಗವಾಗಿ ದುಬಾರೆ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾದರು.
Kshetra Samachara
02/12/2024 05:26 pm