ಚಿಕ್ಕಮಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಅಲ್ಲದೇ ನಾಳೆ ಜಿಲ್ಲೆಗೆ ಯೆಲ್ಲೋ ಹಾಗೂ ಅರೇಂಜ್ ಅಲರ್ಟ್ ನೀಡಿರುವುದರಿಂದ ಮುಂಜಾಗ್ರತಾವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ನಾಳೆ(ಡಿಸೆಂಬರ್ 03) ಒಂದು ದಿನ ಮಾತ್ರ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೊರಡಿಸಿದ್ದಾರೆ. ಅಲ್ಲದೇ ಸಾರ್ವಜನಿಕರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕು. ಜಾನುವಾರು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆ ಕಟ್ಟೆಗಳಿಗೆ ತೆರಳಬಾರದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
02/12/2024 06:27 pm