ಮೂಡಿಗೆರೆ: ಕ್ಷೇತ್ರದ ಕಾರ್ಯಕರ್ತರ ಒಳ ಅಸಮಧಾನದಿಂದ ಬಿಜೆಪಿ ಪಕ್ಷ ಸೋಲು ಅನುಭವಿಸುವಂತಾಯಿತು ಎಂದು ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ವಿಷಾದ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಬಾಳೂರು ಹೋಬಳಿಯ ಬೆಜೆಪಿ ಘಟಕದ ನೂತನ ಅಧ್ಯಕ್ಷರ ಪದಗ್ರಹಣ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಾಳೂರು ಶಕ್ತಿ ಕೇಂದ್ರ ಒಂದು ಸಮಯದಲ್ಲಿ ಕಮ್ಯೂನಿಸ್ಟ್ ಪಕ್ಷದ ವರ್ಚಸ್ಸಿತ್ತು. ಅದನ್ನು ಬಿಜೆಪಿ ಕಾರ್ಯಕರ್ತರು ಹಂತಹಂತವಾಗಿ ಕಮ್ಯುನಿಸ್ಟ್ ಜತೆ ಜಂಟಿಯಾಗಿ ಬಿಜೆಪಿ ಪಕ್ಷಕ್ಕೆ ಸೇರಿಸಿ ಈಗ ಬಿಜೆಪಿ ಪಕ್ಷ ಬೂತ್ ಮಟ್ಟದಲ್ಲಿ ಗಟ್ಟಿಯಾಗಿದೆ. ಇದಕ್ಕೆ ಕಾರ್ಯಕರ್ತರ ಪರಿಶ್ರಮದಿಂದ ಸಾಧ್ಯವಾಗಿದೆ. ನಮ್ಮ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಪಣ ತೊಡಬೇಕು ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ ದೇಶದ ವಕ್ಫ್ ಕಾಯಿದೆಯನ್ನು ಸಂವಿಧಾನ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಸರ್ವ ಧರ್ಮದ ಶಾಸನಗಳು ಸಂವಿಧಾನದ ವ್ಯಾಪ್ತಿಗೆ ಬರಬೇಕು. ವಿವಿಧ ಮಂಡಳಿಗಳು ಸಂವಿಧಾನದಡಿಯಲ್ಲೇ ಕಾರ್ಯ ನಿರ್ವಹಿಸಬೇಕು.ವಕ್ಫ್ ಕಾಯಿದೆಯು ಸಂವಿಧಾನದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ. ಅದನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನದಡಿಯಲ್ಲಿ ಕಾಯಿದೆ ತಿದ್ದುಪಡಿ ಮಾಡಲು ಮುಂದಾಗಿದೆ ಎಂದರು.
Kshetra Samachara
02/12/2024 07:35 pm