ಹಾಸನ: ಹಾಸನದ ಪ್ರೊಬೇಷನರಿ ಐಪಿಎಸ್ ಅಧಿಕಾರಿಯಾಗಿ ಡ್ಯೂಟಿಗೆ ರಿಪೋರ್ಟ್ ಮಾಡುವ ಮೊದಲ ದಿನವೇ ಭೀಕರ ಅಪಘಾತದಲ್ಲಿ 27 ವರ್ಷದ ಯುವ ಐಪಿಎಸ್ ಅಧಿಕಾರಿ ದುರಂತ ಅಂತ್ಯ ಕಂಡಿದ್ದಾರೆ.
ಹೌದು, ಡ್ಯೂಟಿಗೆ ರಿಪೋರ್ಟ್ ಮಾಡುವ ಮೊದಲ ದಿನವೇ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಹಾಸನದ ಕಿತ್ತಾನೆ ಗ್ರಾಮದ ಬಳಿ ಅಪಘಾತ ನಡೆದಿದ್ದು, ತಲೆಗೆ ತೀವ್ರವಾಗಿ ಗಾಯಗೊಂಡು ಹರ್ಷಬರ್ಧನ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪೊಲೀಸ್ ವಾಹನದ ಟೈಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಅಪಘಾತವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮೈಸೂರಿನ ಐಜಿಪಿ ಕಚೇರಿಗೆ ತೆರಳಿ ಅಧಿಕಾರಿ ಭೇಟಿಯಾಗಿದ್ದ ಹರ್ಷಬರ್ಧನ್ ಮಹತ್ವದ ಮಾತುಕತೆ ನಡೆಸಿದ್ದರು. ಈ ವೇಳೆ ಹರ್ಷಬರ್ಧನ್‌ಗೆ ಶುಭ ಕೋರಿ ಕಳುಹಿಸಲಾಗಿತ್ತು. ಕಿತ್ತನೆ ಗ್ರಾಮದ ಬಳಿಕ ಅಪಘಾತದ ಮಾಹಿತಿ ಸಿಗುತ್ತದೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ಬರ್ಧನ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರ ಕುರಿತು ಪೊಲೀಸರು ಚರ್ಚಿಸಿದ್ದರು. ಆದರೆ ಹರ್ಷ ಬರ್ಧನ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣಲಿಲ್ಲ. ಬದಲಾಗಿ ಕ್ಷಣಕ್ಷಣಕ್ಕೂ ಆರೋಗ್ಯ ಹದಗೆಟ್ಟಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಒಟ್ಟಾರೆ, ಐಪಿಎಸ್ ಅಧಿಕಾರಿಯಾಗಿ ಜೀವನ ಪ್ರಾರಂಭ ಮಾಡುವ ಮುನ್ನವೇ ಹರ್ಷವರ್ಧನ್ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ.
PublicNext
02/12/2024 07:53 pm