ಕೊಡಗು: ಕೊಡಗು ಜಿಲ್ಲೆಯಲ್ಲಿ ಈ ಹಿಂದೆ 500 ಮಂದಿ ಗೃಹರಕ್ಷಕರನ್ನು ನಿಯೋಜಿಸಿಕೊಳ್ಳಲು ಅವಕಾಶ ಇತ್ತು. ಆದರೆ ಯಾರೂ ಸಹ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸಲು ಮುಂದೆ ಬರದಿರುವ ಹಿನ್ನೆಲೆ 200 ಜನರನ್ನು ಕಡಿಮೆ ಮಾಡಿ, 300 ಮಂದಿ ನೇಮಕದಲ್ಲಿ 187 ಮಂದಿ ಮಾತ್ರ ಗೃಹರಕ್ಷಕದಳ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್.ಸುಂದರರಾಜ್ ತಿಳಿಸಿದ್ದಾರೆ.
ಜಿಲ್ಲಾ ಗೃಹ ರಕ್ಷಕದಳ ವತಿಯಿಂದ ನಗರದ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಸೋಮವಾರ ನಡೆದ ‘ಗೃಹ ರಕ್ಷಕದಳ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇರೆ ಬೇರೆ ಜಿಲ್ಲೆಗಳಲ್ಲಿ ಗೃಹರಕ್ಷಕದಳದಲ್ಲಿ ಕರ್ತವ್ಯ ನಿರ್ವಹಿಸಲು ಸ್ವಯಂ ಪ್ರೇರಣೆಯಿಂದ ಮುಂದೆ ಬರುತ್ತಾರೆ. ಆ ನಿಟ್ಟಿನಲ್ಲಿ ವೃತ್ತಿಯನ್ನು ಗೌರವಿಸಿ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಗೃಹರಕ್ಷಕ ಸಿಬ್ಬಂದಿಗೆ ಕರ್ತವ್ಯ ನಿರ್ವಹಿಸುವ ದಿನಕ್ಕೆ 500 ರೂ ನೀಡಲಾಗುತ್ತದೆ. ಗೃಹರಕ್ಷಕರು ಪೊಲೀಸರಂತೆ ಕರ್ತವ್ಯ ನಿರ್ವಹಿಸುವುದನ್ನು ಕಾಣುತ್ತೇವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
PublicNext
02/12/2024 08:03 pm