ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ಕಾಗವಾಡ ತಾಲೂಕಿನಾದ್ಯಂತ ಸುಮಾರು 220 ರೈತ ಕುಟುಂಬದ 1666 ಎಕರೆ ರೈತರ ಜಮೀನು ವಕ್ಫ್ ಆಸ್ತಿ ಎಂದು ನಮೂದಾಗಿದೆ. ರಾಜ್ಯಾದ್ಯಂತ ರೈತರ ಲಕ್ಷಾಂತರ ಎಕರೆ ಜಮೀನಿನ ಪಹಣಿ ಪತ್ರಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದು, ಇದರಿಂದ ರೈತರು ಆತಂಕಕ್ಕೊಳಗಾಗಿದ್ದಾರೆ. ಶೀಘ್ರವೇ ಸರ್ಕಾರ ವಕ್ಫ್ ಹೆಸರು ತೆಗೆದು ಹಾಕಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಮುಖಂಡರು, ರೈತರಿಂದ ಪ್ರತಿಭಟನೆ ಜರುಗಿತು.
ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ರೈತರು ವಕ್ಫ್ ಬೋರ್ಡ್ ಹಠಾವೋ, ದೇಶ್ ಬಚಾವೋ ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರ ಹಾಕಿದರು.ಈ ಹೋರಾಟದಲ್ಲಿ ಸುಮಾರು 300 ಕ್ಕೂ ಹೆಚ್ಚು ಮುಸ್ಲಿಂ ರೈತರ ಆಸ್ತಿಯಲ್ಲಿ ವಕ್ಫ್ ಹೆಸರು ದಾಖಲಾಗಿದ್ದು ಮುಸ್ಲಿಂ ರೈತರೇ ವಕ್ಫ್ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ.
ಶೀಘ್ರವೇ ಸರ್ಕಾರ ರೈತರ ಜಮೀನುಗಳಲ್ಲಿ ನೋಂದಾಯಿಸಿರುವ ವಕ್ಫ್ ಹೆಸರನ್ನು ತೆಗೆದು ಹಾಕಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ. ಶಾಸಕರು, ಅಧಿಕಾರಿಗಳು, ಮಂತ್ರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಬೇಕಾಗುತ್ತದೆ ಎಂದು ಪ್ರತಿಭಟನಾಕರಾರು ಎಚ್ಚರಿಕೆ ನೀಡಿದರು.
Kshetra Samachara
02/12/2024 08:09 pm