ಕೋಲಾರ: ಕೆಜಿಎಫ್ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಕಲಾ ಶಶಿಧರ್ ನಗರದ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ ಅಹವಾಲು ಸ್ವೀಕರಿಸಿದರು. ಕೆಲವರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಿದರು. ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಲ್ಲಸಲ್ಲದ ನೆಪವೊಡ್ಡಿ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬಾರದು. ಸಕಾಲದಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳ ಆಗಬೇಕೆಂದು ಸೂಚಿಸಿದರು.
Kshetra Samachara
02/12/2024 08:15 pm