ಬೆಂಗಳೂರು: 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು. ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಬೆಳಗಾವಿಯಲ್ಲಿ ಡಿಸೆಂಬರ್ 26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿಸೆಂಬರ್ 27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧಾರಿಸಲಾಗಿದೆ. ಅಲ್ಲದೆ ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.
ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ. ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ.
ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧಾರ. ಹಾಗೇ
ವರ್ಷವಿಡೀ ಎಲ್ಲಾ ಶಾಲೆಗಳಲ್ಲಿ ʻಗಾಂಧಿ ಭಾರತʼ ಅಡಿಯಲ್ಲಿ ʻನಾವು ಮನುಜರುʼ ಕಾರ್ಯಕ್ರಮಗಳ ಆಯೋಜಿಸಲು ನಿರ್ಧಾರಿಸಲಾಗಿದೆ. ಜೊತೆಗೆ ಗಾಂಧೀಜಿ ಅವರು ಬೋಧಿಸಿದ ಸಪ್ತ ಪಾತಕಗಳು ಹಾಗೂ ಸಂವಿಧಾನದ ಪೀಠಿಕೆಗಳನ್ನು ಮುದ್ರಿಸಿ ಎಲ್ಲಾ ಶಾಲೆಗಳಲ್ಲಿ ವಿತರಣೆ ಮಾಡಲು ಸಭೆಯಲ್ಲಿ ನಿರ್ಧಾರಿಸಲಾಗಿದೆ.
PublicNext
02/12/2024 11:07 pm