ಬೆಂಗಳೂರು: ಫೆಂಗಲ್ ಚಂಡಮಾರುತದಿಂದ ಕರ್ನಾಟಕದ ದಕ್ಷಿಣ ಭಾಗದಲ್ಲಿರುವ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ತೆರಳಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ಮೈಸೂರು, ಕೊಡಗು, ಕೋಲಾರ, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆಯನ್ನ ನೀಡಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜು ಹೊರತು ಪಡಿಸಿ ಉಳಿದ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ಇರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
PublicNext
03/12/2024 08:07 am