ಗದಗ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷರಾದ ಕಿಚಡಿ ಕೊಟ್ರೇಶ್ ಅವರ ನೇತೃತ್ವದಲ್ಲಿ ಗದಗ ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ಸಂತೋಷ ಅಕ್ಕಿ, ಹಾಗೂ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಧರ್ಮರಾಜ ಕೊಂಚಿಗೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಗದಗ ಜಿಲ್ಲಾಧ್ಯಕ್ಷರಾದ ಈರಣ್ಣ ಕರಿಬಿಷ್ಠಿ, ಹಾಗೂ ಶಿರಹಟ್ಟಿ ತಾಲೂಕ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಕಾರ್ಯದರ್ಶಿಗಳಾದ ಬಸವರಾಜ ತುಳಿ, ಮುಂತಾದವರು ಉಪಸ್ಥಿತರಿದ್ದರು.
Kshetra Samachara
03/12/2024 10:06 am