ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಶೋಭಿತಾ ಅಂತ್ಯಕ್ರಿಯೆ

ಹಾಸನ : ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ನಟಿ ಶೋಭಿತಾ ಮೃತದೇಹವನ್ನ ಹುಟ್ಟೂರಾದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮಕ್ಕೆ ತರಲಾಗಿದೆ.

ಶೋಭಿತಾ ನಿವಾಸದೆದುರು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೆರೂರು ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಶೋಭಿತಾ ಮೃತದೇಹ ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇಡೀ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಇಂದೇ ಶೋಭಿತಾ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಎರಡು ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದರು. ಶೋಭಿತಾ ತಾಯಿ, ಮೂವರು ಸಹೋದರಿಯರು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

Edited By : Nirmala Aralikatti
PublicNext

PublicNext

03/12/2024 11:03 am

Cinque Terre

13.96 K

Cinque Terre

0