ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ವಿಜೃಂಭಣೆಯಿಂದ ಜರುಗಿದ ಶ್ರೀ ಬನಶಂಕರಿ ಅಮ್ಮನವರ ಜಾತ್ರೋತ್ಸವ

ಕೊಡಗು: ಐತಿಹಾಸಿಕ ಹಿನ್ನೆಲೆ ಹೊಂದಿರುವ ಹೆಬ್ಬಾಲೆ ಗ್ರಾಮದ ಗ್ರಾಮ ದೇವತೆ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಜಾತ್ರೋತ್ಸವ ಶ್ರದ್ಧಾ ಭಕ್ತಿಯೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಶ್ರೀ ಬನಶಂಕರಿ ಅಮ್ಮನವರ ದೇವಸ್ಥಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ಹಾಗೂ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ಕಾರ್ತಿಕ ಮಾಸ ಕೃಷ್ಣ ಪಕ್ಷ ಅಮಾವಾಸ್ಯೆಯಂದು ರಾತ್ರಿ ಶಕ್ತಿ ಸ್ವರೂಪಿಣಿ ಬನಶಂಕರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಪ್ರತಿ ವರ್ಷದಂತೆ ಅಮ್ಮನವರ ಸನ್ನಿಧಿಯಲ್ಲಿ ಬೆಳಿಗ್ಗೆ 7 ಘಂಟೆಗೆ ಗಣಪತಿ ಪೂಜೆ, ಪುಣಾಹಃ ರಕ್ಷಾಬಂಧನ ಧ್ವಜಾರೋಹಣ ನವಗ್ರಹ ಸ್ಥಾಪನೆ, ನವಗ್ರಹ ಪೂಜೆ ಮಹಾ ಮಂಗಳಾರತಿ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ದೇವಾಲಯದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನೇತೃತ್ವದಲ್ಲಿ ನಡೆದವು.

ಗ್ರಾಮದಲ್ಲಿ ದೇವಿಯ ವಾರ್ಷಿಕ ಹಬ್ಬದ ಅಂಗವಾಗಿ ಪವಿತ್ರ ಬನದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬೆಳಿಗ್ಗೆ ಕಳಶ ಸ್ಥಾಪಿಸುವುದರೊಂದಿಗೆ ವಿವಿಧ ಕಾರ್ಯಗಳು ದೇವಸ್ಥಾನ ಸಮಿತಿ ಅಧ್ಯಕ್ಷ ರಮೇಶ್ ಮತ್ತು ಕಾರ್ಯದರ್ಶಿ ಎಚ್.ಎಚ್.ರಾಜಶೇಖರ್, ಖಜಾಂಜಿ ಸೋಮಣ್ಣ ಹಾಗೂ ಸಮಿತಿ ಪದಾಧಿಕಾರಿಗಳು, ಸದಸ್ಯರ ನೇತೃತ್ವದಲ್ಲಿ ನೆರವೇರಿದವು.

Edited By : Ashok M
PublicNext

PublicNext

03/12/2024 12:11 pm

Cinque Terre

15.09 K

Cinque Terre

0

ಸಂಬಂಧಿತ ಸುದ್ದಿ