ಮೈಸೂರು : ಫೆಂಗಲ್ ಚಂಡ ಮಾರುತದ ಎಫೆಕ್ಟ್ ಮೈಸೂರಿಗೂ ತಟ್ಟಿದೆ. ಮೈಸೂರು ಜಿಲ್ಲಾದ್ಯಂತ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ರೈತರು ಕಟಾವು ಮಾಡಿದ್ದ ಭತ್ತ ಜಲಾವೃತ್ತವಾಗಿ ಬೆಳೆ ನಾಶವಾಗಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಾಳೆನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈತ ತಮ್ಮ ಜಮೀನಿನಲ್ಲಿ ಭತ್ತದ ಬೆಳೆಯನ್ನು ಕಟಾವು ಮಾಡಿದ್ದ, ಕೈಗೆ ಬಂದ ತುತ್ತು ಬಾಯಿಗೆ ಬಾರದೆ ರೈತರು ಕಂಗಾಲಾಗಿದ್ದಾರೆ.
ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
PublicNext
03/12/2024 12:36 pm