ಬೆಳಗಾವಿ: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಗಣೇಶ ನಗರದ ನಿವಾಸಿ ಶ್ರೀಶೈಲ ಕಂಬಾರ (18) ಎಂಬುವವರು ಸಾವನ್ನಪ್ಪಿದ್ದಾರೆ. ಮೂಡಲಗಿ ಪಟ್ಟಣದ ಕಡೆಯಿಂದ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ರಸ್ತೆ ಮೇಲೆ ನಿಲ್ಲಿಸಿದ ಕಬ್ಬು ತುಂಬಿದ ಟ್ರ್ಯಾಕ್ಟರ್ ಟೇಲರ್ನ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಠಾಣೆ ಪಿಎಸ್ಐ ರಾಜು ಪೂಜೇರಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
PublicNext
03/12/2024 12:40 pm