ನವದೆಹಲಿ: ರಾಜ್ಯ ಬಿಜೆಪಿಯಲ್ಲಿನ ಬಣ ಗುದ್ದಾಟ ತಾರಕ್ಕಕ್ಕೆ ಏರಿದೆ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ತರುಣ್ ಚುಗ್ ರಾಜ್ಯಕ್ಕೆ ಎಂಟ್ರಿಯಾಗಿದ್ರೆ ಆತ್ತ ಯತ್ನಾಳ್ ನೇತೃತ್ವದ ರೆಬಲ್ಸ್ ಟೀಂ ದೆಹಲಿಯ ಕರ್ನಾಟಕ ಭವನದಲ್ಲಿ ಸಭೆ ನಡೆಸಿದ್ದಾರೆ.
ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದ ನಂತರ ದೆಹಲಿಯಲ್ಲೇ ಇರುವ ಯತ್ನಾಳ್ ಇದುವರೆಗೂ ಬಿಜೆಪಿ ಹೈಕಮಾಂಡ್ ನಾಯಕರನ್ನ ಭೇಟಿಯಾಗಿಲ್ಲ, ಆದ್ರೆ ಇಂದು ಬೆಳಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಅರವಿಂದ್ ಲಿಂಬಾವಳಿ, ಶಾಸಕ ಬಿಪಿ ಹರೀಶ್, ಎನ್ ಆರ್ ಸಂತೋಷ್ ಸೇರಿ ಹಲವು ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ.
ಇಂದು ಮಧ್ಯಾಹ್ನ ವಕ್ಫ್ ವಿಚಾರವಾಗಿ ಜಗದಾಂಬಿಕ ಪಾಲ್ ಭೇಟಿಯಾಗಲಿರುವ ತಂಡ ಅದಕ್ಕೂ ಮುನ್ನ ಸಭೆ ಸೇರಿ ಚರ್ಚೆ ನಡೆಸಿದ್ದಾರೆ.
ಇದರ ಜೊತೆಗೆ ಯತ್ನಾಳ್‌ಗೆ ನೋಟಿಸ್ ನೀಡಿರುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಸಾಧ್ಯವಾದರೆ ಬಿಜೆಪಿ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡಿ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಹಾಗೂ ವಿಜಯೇಂದ್ರ ನಡೆಯ ಬಗ್ಗೆ ವಿವರಿಸುವ ಸಾಧ್ಯತೆ ಇದೆ.
PublicNext
03/12/2024 12:46 pm