ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗಿಳಿದ ಯುವಕರೊಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ನಡೆದಿದೆ. ಇದೀಗ ಅವರು ಮೃತದೇಹ ಪತ್ತೆಯಾಗಿದೆ.
ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಹಾಗೂ ಇಬ್ಬರು ಸಂಬಂಧಿಕರು ಸೋಮವಾರ ನದಿಗೆ ಮೀನು ಹಿಡಿಯಲೆಂದು ಇಳಿದಿದ್ದರು. ಈ ವೇಳೆ ಪ್ರಸಾದ್ ನೀರಿನ ಸೆಳೆತಕ್ಕೆ ಸಿಲುಕಿದ್ದರು. ತಕ್ಷಣ ಪ್ರಸಾದ್‌ರನ್ನು ಜತೆಗಿದ್ದವರು ರಕ್ಷಿಸಲು ಯತ್ನಿಸಿದ್ದರು. ಆದರೆ ಪ್ರಸಾದ್ ಮುಳುಗಿ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿತ್ತು. ಸತತ ಕಾರ್ಯಾಚರಣೆ ಬಳಿಕ ಅವರ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪ್ರಸಾದ್ ವಿವಾಹಿತರಾಗಿದ್ದು ಪತ್ನಿ, ಓರ್ವ ಪುತ್ರನಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದು, ತನಿಖೆ ನಡೆಸುತ್ತಿದ್ದಾರೆ.
Kshetra Samachara
03/12/2024 01:35 pm