ಬೆಂಗಳೂರು : ಬಿಗ್ ಬಾಸ್ ಕನ್ನಡ 11ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಲ್ಲಿ ಮುಖವಾಡ ಕಳಚಿ ಬಿಡ್ತೀನಿ ಅಂತ ಅಬ್ಬರಿಸುತ್ತಲೇ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಭಾನುವಾರದ ಎಪಿಸೋಡ್ ನಲ್ಲಿ ಕಿಚ್ಚ ಸುದೀಪ್ ಬಳಿ ರಿಕ್ವೇಸ್ಟ್ ಮಾಡಿ ಮನೆಯಿಂದ ಹೊರ ಬಂದಿದ್ದಾರೆ. ಸಿಕ್ಕ ಒಂದು ಒಳ್ಳೆಯ ಅವಕಾಶವನ್ನು ಕಳೆದುಕೊಂಡಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನಿರ್ಧಾರವನ್ನು ಭಾವನಾತ್ಮಕ ಪತ್ರದ ಮೂಲಕ ಹಂಚಿಕೊಂಡಿದ್ದು ಕಿಚ್ಚನ ಬಳಿ ಕ್ಷಮೆಯಾಚಿದ್ದಾರೆ.
ನನ್ನ ಪ್ರೀತಿಯ ಕನ್ನಡಿಗರೇ, ನನ್ನ ಬಿಗ್ ಬಾಸ್ ಪಯಣ ಮುಗಿದಿದೆ. ಆಟದ ಮೇಲೆ ಗಮನ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ. ಮುನ್ನಡೆಯುವ ಇಚ್ಛೆಯಿದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ. ಯಾರನ್ನೂ ಯಾವುದನ್ನೂ ನಾನು ಹಗುರವಾಗಿ ತೆಗೆದುಕೊಂಡಿಲ್ಲ. ಜೀವನದ ಜವಾಬ್ದಾರಿಗಳಿಗೆ ಆರೋಗ್ಯವನ್ನು ಕಾಪಾಡಿಕೊಂಡು ಮುನ್ನಡೆಯುವ ಸಲುವಾಗಿ ನಾನು ಈ ನಿರ್ಧಾರ ಮಾಡಿರುವೆ' ಎಂದು ಪತ್ರ ಆರಂಭಿಸಿದ್ದಾರೆ ಶೋಭಾ ಶೆಟ್ಟಿ.
ಇದೆಲ್ಲದರ ಮಧ್ಯೆ ನೀವು ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಅಭಾರಿಯಾಗಿದ್ದೇನೆ. ತಿಳಿದೋ ತಿಳಿಯದೆಯೋ ನನ್ನಿಂದ ಯಾರಿಗಾದರೂ ಬೇಸರವಾಗಿದ್ದರೆ ದಯವಿಟ್ಟು ಕ್ಷಮಿಸಿ. ನನ್ನ ಜನರಿಗೆ, ಕಲರ್ಸ್ ಕನ್ನಡ ತಂಡಕ್ಕೆ ಹಾಗು ನನ್ನ ಪ್ರೀತಿಯ ಕಿಚ್ಚ ಸುದೀಪ್ ಸರ್ ನಿಮಗೆ ಧನ್ಯವಾದಗಳು ಎಂದು ಶೋಭಾ ಶೆಟ್ಟಿ ಅವರು ಫೋಸ್ಟ್ ಹಾಕಿದ್ದಾರೆ. ಆದರೇ ಇವರ ನಿಧಾ೯ರದಿಂದ ಕಿಚ್ಚನ ಅಭಿಮಾನಿಗಳಿಗೆ , ಬಿಗ್ ಬಾಸ್ ಪ್ರೇಕ್ಷಕರಿಗೂ ಕೂಡ ತುಂಬಾನೇ ನೋವು ಆಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಗಳು ಹರಿದಾಡುತ್ತಿದೆ.
PublicNext
03/12/2024 01:47 pm