ಮೈಸೂರು: ಫೆಂಗಲ್ ಚಂಡ ಮಾರುತದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಜಿಟಿ ಜಿಟಿ ಮಳೆಗೆ ಮರಗಳು ಧರೆಗುರುಳಿವೆ.
ಮೈಸೂರಿನ ಸರಸ್ವತಿ ಪುರಂನಲ್ಲಿ ಈ ಘಟನೆ ನಡೆದಿದ್ದು ಏಕಕಾಲಕ್ಕೆ ಎರಡು ಮರಗಳು ನೆಲಕಚ್ಚಿವೆ.
ಮರಗಳು ಉರುಳಿ ಬಿದ್ದ ಪರಿಣಾಮ ಎರಡು ಕಾರುಗಳು ಜಖಂ ಆಗಿವೆ. ಮರಗಳು ಕಾರಿನ ಮೇಲೆ ಉರುಳಿ ಬಿದ್ದ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮರಗಳನ್ನು ತೆರವುಗೊಳಿಸುತ್ತಿದ್ದಾರೆ.
PublicNext
03/12/2024 02:54 pm