ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ಬ್ರಿಮ್ಸ್ ಆಸ್ಪತ್ರೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಬೀದರ್: ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸುಮಾರು ₹4.5 ಕೋಟಿ ವೆಚ್ಚದ ಬಿಎಸ್ಸಿ ನರ್ಸಿಂಗ್ ಬಾಲಕಿಯರ ವಸತಿ ಗೃಹ ನಿರ್ಮಾಣ ಕಾಮಗಾರಿ ಹಾಗೂ ಸುಮಾರು ₹1.11 ಕೋಟಿ ವೆಚ್ಚದ ಬ್ರಿಮ್ಸ್ ಆಸ್ಪತ್ರೆಯಲ್ಲಿ ನೂತನ ಡಿ.ಐ.ಪಿ.ಎಚ್.ಎಲ್ ಲ್ಯಾಬ್ ನಿರ್ಮಾಣ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, “ಆರೋಗ್ಯ ಸೇವೆಗಳ ಉತ್ತಮೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ವಸತಿ ವ್ಯವಸ್ಥೆ ನೀಡುವ ನಿಟ್ಟಿನಲ್ಲಿ ಈ ವಸತಿ ಗೃಹ ನಿರ್ಮಾಣ ಮಾಡಲಾಗುತ್ತಿದೆ. ಹೊಸ ಲ್ಯಾಬ್ ಸ್ಥಾಪನೆಯಿಂದ ಸಂಶೋಧನೆ ಮತ್ತು ಆರೋಗ್ಯ ತಪಾಸಣೆಗಳಲ್ಲಿ ಗುಣಮಟ್ಟ ಹೆಚ್ಚಲಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ರಹಿಂ ಖಾನ, ಬ್ರಿಮ್ಸ್ ಆಸ್ಪತ್ರೆಯ ಅಧಿಕಾರಿಗಳು, ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/12/2024 04:33 pm

Cinque Terre

960

Cinque Terre

0