ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ: ತಲಪಾಡಿ ಟೋಲ್ ಸಿಬ್ಬಂದಿಗೆ ಹಲ್ಲೆ - ವೀಡಿಯೋದಲ್ಲಿ ಕೃತ್ಯ ಸೆರೆ

ಉಳ್ಳಾಲ: ಕಾರಿನಲ್ಲಿ ಸಂಚರಿಸುತ್ತಿದ್ದ ಮೂವರು ಯುವಕರು ಟೋಲ್ ಸಿಬ್ಬಂದಿಗೆ ಹಲ್ಲೆ ನಡೆಸಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿರುವ ಓರ್ವನನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರು ತಲೆಮರೆಸಿಕೊಂಡಿದ್ದಾರೆ.

ಉಳ್ಳಾಲ ನಿವಾಸಿಗಳಾದ ಝುಲ್ಫಾನ್, ನಿಫಾನ್, ಫಯಾಝ್ ಟೋಲ್ ಸಿಬ್ಬಂದಿಗೆ ಹಲ್ಲೆ ನಡೆಸಿದವರು.

ಮಂಗಳೂರಿನಿಂದ ಕೇರಳದ ಕಡೆಗೆ ಐವರು ಯುವಕರ ತಂಡ ಕಾರಿನಲ್ಲಿ ಸಂಚರಿಸುತ್ತಿತ್ತು. ತಲಪಾಡಿ ಟೋಲ್ ಗೇಟ್‌ನಲ್ಲಿ ಟೋಲ್‌ ಪಾವತಿಸದೆ ಕಾರು ಮುಂದೆ ಚಲಿಸಿತ್ತು. ಈ ವೇಳೆ ಟೋಲ್ ನಿರ್ವಹಣೆ ನಡೆಸುವ ಇಜಿಎಸ್‌ ಸಂಸ್ಥೆಯ ಉದ್ಯೋಗಿ ಕಾರಿನ ಹಿಂಭಾಗಕ್ಕೆ ಕೈಯಿಂದ ಬಡಿದಿದ್ದಾನೆ. ಇದರಿಂದ ಕುಪಿತಗೊಂಡ ತಂಡ ಕಾರನ್ನು ನಿಲ್ಲಿಸಿ ಸಿಬ್ಬಂದಿಯತ್ತ ದೌಡಾಯಿಸಿ ಹಲ್ಲೆ ನಡೆಸಿದ್ದಾರೆ.

ಘಟನೆಯಲ್ಲಿ ಟೋಲ್ ಸಿಬ್ಬಂದಿ ಮನು, ಸುಧಾಮ, ಅಮನ್ ಎಂಬವರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಗಳಲ್ಲಿ ಒಬ್ಬನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮತ್ತಿಬ್ಬರು ತಲೆಮರೆಸಿಕೊಂಡಿದ್ದಾರೆ. ಘಟನೆಯ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

Edited By : Somashekar
PublicNext

PublicNext

03/12/2024 05:14 pm

Cinque Terre

13.03 K

Cinque Terre

1

ಸಂಬಂಧಿತ ಸುದ್ದಿ