ಚಿಕ್ಕಮಗಳೂರು: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಭೇಟಿ ನೀಡಿ ನಿಲ್ದಾಣದಲ್ಲಿರುವ ಶೌಚಾಲಯ, ಅಂಗಡಿ ಹಾಗೂ ಹೋಟೆಲ್ ಗಳ ಶುಚಿತ್ವವನ್ನು ಪರಿಶೀಲನೆ ನಡೆಸಿದರು. ಈ ವೇಳೆ ಶೌಚಾಲಯದಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದಕ್ಕೆ ಅಧಿಕಾರಿಗಳ ವಿರುದ್ದ ಗರಂ ಆದ್ರು. ನಿಲ್ದಾಣದಲ್ಲಿದ್ದ ವಿದ್ಯಾರ್ಥಿನಿಯರು, ಮಹಿಳೆಯರ ಸಮಸ್ಯೆಗಳನ್ನು ಆಲಿಸಿ, ಶಕ್ತಿ ಯೋಜನೆಯ ಕುರಿತು ಪ್ರಯಾಣಿಕರೊಂದಿಗೆ ಅಭಿಪ್ರಾಯ ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ಆಧಾರ್ ಕಾರ್ಡ್ ಇಲ್ಲ ಎಂದಾಗ, ಗುರುತಿನ ಚೀಟಿ ಇಲ್ಲದೆಯೂ ಪ್ರಯಾಣಿಸಬಹುದು ಎಂದು ತಿಳಿಸಿರುವುದಾಗಿ ಮಾಹಿತಿ ನೀಡಿದರು. ಬಸ್ ನಿಲ್ದಾಣದ ಅಂಗಡಿ ವ್ಯಾಪಾರಿಗಳಿಗೆ ಎಂಆರ್ ಪಿ ದರಕ್ಕಿಂತ ಹೆಚ್ಚಿನ ದರಕ್ಕಿಂತ ಪ್ರಯಾಣಿಕರಿಂದ ಹೆಚ್ಚಿನ ಹಣ ಸ್ವೀಕರಿಸಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಹಾಲುಣಿಸುವ ಕೊಠಡಿಯು ಗೋಡೌನ್ ಆಗಿದ್ದು ಹಾಗೂ ಶೌಚಾಲಯ ನಿರ್ವಹಣೆಯಲ್ಲಿ ವಿಫಲವಾಗಿದ್ದು ವಿಭಾಗಿಯ ನಿಯಂತ್ರಣ ಅಧಿಕಾರಿಯಗಳಿಗೆ ವರದಿ ನೀಡುವಂತೆ ಸೂಚಿಸುತ್ತೇನೆ ಎಂದರು.
PublicNext
03/12/2024 05:19 pm