ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ವಿಕಲಚೇತನರಿಗೆ ಅನುಕಂಪಕ್ಕಿಂತ, ಅವಕಾಶ ನೀಡಿ ಮುಖ್ಯವಾಹಿನಿಗೆ ತನ್ನಿ: ಎಡಿಸಿ ಬಿ.ಟಿ. ಕುಮಾರ್‌ ಸ್ವಾಮಿ

ಚಿತ್ರದುರ್ಗ: ವಿಕಲಚೇತನರಿಗೆ ಅನುಕಂಪ ತೋರಿಸುವುದಕ್ಕಿಂತ ಮುಖ್ಯವಾಗಿ ನಾವು ಅವಕಾಶ ಕಲ್ಪಿಸಿಕೊಡಬೇಕು. ಆಗ ಮಾತ್ರ ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

 

ನಗರದ ತರಾಸು ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಹಾಗೂ ವಿವಿದೋದ್ದೇಶ ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಸಹಯೋಗದಲ್ಲ್ಲಿ ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ ಎಂಬ ಘೋಷವಾಕ್ಯದೊಂದಿಗೆ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ  ಉದ್ಘಾಟಿಸಿ ಅವರು ಮಾತನಾಡಿದರು.

ವಿಕಲಚೇತನರಿಗೆ ಅವಕಾಶ ಕೊಡದೇ ವಂಚಿತರನ್ನಾಗಿ ಮಾಡಬಾರದು. ಯಾವುದೇ ಕಾರಣಕ್ಕೂ ವಿಕಲಚೇತನರು ಎದೆಗುಂದಬಾರದು. ಉತ್ಸಾಹ, ಛಲ, ಧೈರ್ಯ, ಕಠಿಣ ಪರಿಶ್ರಮವಿದ್ದರೆ ಸಾಧನೆ ಮಾಡುವುದು ಕಷ್ಟವೇನಲ್ಲ. ಪ್ಯಾರಾ ಒಲಂಪಿಕ್, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಕಲಚೇತನರು ನಾವು ಯಾರಿಗೂ ಕಮ್ಮಿ ಇಲ್ಲ ಎಂಬಂತೆ ಸಾಧನೆ ಮಾಡಿರುವ ಉದಾಹಣೆಗಳಿವೆ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

03/12/2024 05:46 pm

Cinque Terre

2.22 K

Cinque Terre

0

ಸಂಬಂಧಿತ ಸುದ್ದಿ