ಶಿವಮೊಗ್ಗ : ಮುಸಲ್ಮಾನರು ಅನ್ನ ಹಾಕಿದ ಮನೆಗೆ ಕನ್ನ ಹಾಕುವವರು. ಈ ದೇಶದಲ್ಲಿ ಮುಸಲ್ಮಾನರಿಗೆ ಸಿಕ್ಕ ಸಿಕ್ಕಲ್ಲಿ ಹೊಡೆದರೆ ಪರಿಸ್ಥಿತಿ ಏನಾಗುತ್ತದೆ ಎಂದು ಯೋಚಿಸಿದ್ದಾರಾ ? ಎಂದು ರಾಷ್ಟ್ರಭಕ್ತ ಬಳಗದ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿಂದು ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದ್ದಾರೆ. ಬಾಂಗ್ಲಾದಲ್ಲಿ ಇದೇ ರೀತಿ ದೌರ್ಜನ್ಯ ನಡೆಸಿದರೆ ಬಾಂಗ್ಲಾವೂ ಇರುವುದಿಲ್ಲ. ಪಾಕಿಸ್ತಾನವೂ ಇರುವುದಿಲ್ಲ ಎಂದ ಈಶ್ವರಪ್ಪ, ದೇಶದಲ್ಲಿ ದೇವಸ್ಥಾನಗಳ ಮೇಲೆ, ಮಹಿಳೆಯರು ಮಕ್ಕಳ ಮೇಲೆ ದೌರ್ಜನ್ಯ ನಡೆಸುತ್ತಿದ್ದರೂ ಕಾಂಗ್ರೆಸ್ ನಾಯಕರು ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಧುಸಂತರ ಮಾರ್ಗದರ್ಶನದಲ್ಲಿ ಅಖಂಡ ಹಿಂದೂ ಭಾರತ ನಿರ್ಮಾಣವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.
ಇನ್ನು ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಆಪಾದಿಸಿದ ಶ್ರೀಗಳು ಹಾಗೂ ಮುಖಂಡರು, ಧಾರ್ಮಿಕ ಮುಖಂಡನ ಬಂಧನ ವಿರೋಧಿಸಿದರು. ಬಾಂಗ್ಲಾ, ನೇಪಾಳ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನಕ್ಕೂ ಜನ್ಮದಾತೆ ಭಾರತ ಮಾತೆ. ಆದರೂ ಆ ಮಕ್ಕಳಿಗೆ ಇನ್ನೂ ಬುದ್ಧಿ ಬಂದಿಲ್ಲ. ಧಾರ್ಮಿಕ ಮೂಲಭೂತವಾದವನ್ನು ಮುಂದಿಟ್ಟುಕೊಂಡು ದೇಶ ಕಟ್ಟಲು ಮುಂದಾದ ಪಾಕಿಸ್ತಾನ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ವಸುದೈವ ಕುಟುಂಬಕಂ ಎನ್ನುವುದು ಭಾರತೀಯರ ನಂಬಿಕೆಯಾಗಿದೆ. ಆದರೆ ಇದನ್ನು ಒಡೆಯಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
PublicNext
03/12/2024 05:53 pm